Select Your Language

Notifications

webdunia
webdunia
webdunia
webdunia

ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಶಾಲೆ

ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಶಾಲೆ
bangalore , ಶುಕ್ರವಾರ, 8 ಅಕ್ಟೋಬರ್ 2021 (16:33 IST)
ಪಾಲಿಕೆ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ವಂಚಿತವಾಗಿರುವ ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬಿಬಿಎಂಪಿ ರೂಪಿಸಿರುವ 'ಸ್ಕೂಲ್‌ ಆನ್‌ ವೀಲ್ಹ್‌' (ಮನೆ ಬಾಗಿಲಿಗೆ ಶಾಲೆ) ಯೋಜನೆಯ ಪ್ರಾಯೋಗಿಕ ಜಾರಿಗೆ ಸಿದ್ಧತೆ ನಡೆಸಿದೆ.
 
ಶಿಕ್ಷಣದಿಂದ ವಂಚಿತವಾಗಿರುವ ಹಾಗೂ ಶಾಲೆಯನ್ನು ತೊರೆದಿರುವ 6ರಿಂದ 14 ವರ್ಷದೊಳಗಿನ ಕೊಳಗೇರಿ(Slum) ಮತ್ತು ವಲಸಿಗರ ಮಕ್ಕಳಿಗೆ(Children) ಸಂಚಾರಿ ವಾಹನದಲ್ಲಿ ಶಿಕ್ಷಣ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಮೊದಲಿಗೆ ರಾಜರಾಜೇಶ್ವರಿ ನಗರ ವಲಯದ ದೊಡ್ಡಗೊಲ್ಲರಹಟ್ಟಿಹಾಗೂ ದಕ್ಷಿಣ ವಲಯದ ಹೊಸಕೆರೆಹಳ್ಳಿ ಕೊಳಗೇರಿಯನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ.
 
ಕಳೆದ ಏಪ್ರಿಲ್‌ನಲ್ಲೇ ಪಾಲಿಕೆ ಈ ಯೋಜನೆ ರೂಪಿಸಿತ್ತು. ಆದರೆ, ರಾಜ್ಯ ಸರ್ಕಾರ ಕೊರೋನಾ(Coronavirus) ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ಪುನರಾರಂಭಕ್ಕೆ ಅನುಮತಿಸದ ಹಿನ್ನೆಲೆಯಲ್ಲಿ ಸ್ಥಗಿತವಾಗಿತ್ತು. ಇದೀಗ ಕೊರೋನಾ ಸೋಂಕು ಬಹುತೇಕ ತಗ್ಗಿರುವುದರಿಂದ ರಾಜ್ಯ ಸರ್ಕಾರ ದಸರಾ ಬಳಿಕ ಪ್ರಾಥಮಿಕ ಶಾಲೆ(School) ಪುನರ್‌ ಆರಂಭಕ್ಕೆ ಅನುಮತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಮನೆ ಬಾಗಿಲಿಗೆ ಶಾಲೆ ಪ್ರಾಯೋಗಿಕ ಜಾರಿಗೆ ಸಿದ್ಧತೆ ನಡೆಸಲಾಗಿದೆ ಎಂದು ಪಾಲಿಕೆ ಶಿಕ್ಷಣ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದರು.
 
ರಾಜ್ಯದ 7 ಸ್ಥಳಕ್ಕೆ ಪ್ರವಾಸ ಬರ್ತಾರೆ ಹೊರ ರಾಜ್ಯದ ಮಕ್ಕಳು..!
 
ಸಾಧಕ-ಬಾಧಕ ಅಧ್ಯಯನ:
 
ರಾಜ್ಯ ಸರ್ಕಾರದ ಅನುಮತಿ ಸಿಕ್ಕ ತಕ್ಷಣ ರಾಜರಾಜೇಶ್ವರಿ ನಗರ ವಲಯದ ದೊಡ್ಡಗೊಲ್ಲರಹಟ್ಟಿಹಾಗೂ ದಕ್ಷಿಣ ವಲಯದ ಹೊಸಕೆರೆಹಳ್ಳಿ ಕೊಳಗೇರಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಆರಂಭಿಸಲು ತೀರ್ಮಾನಿಸಲಾಗಿದೆ. ಈ ಪ್ರಾಯೋಗಿಕ ಅವಧಿಯಲ್ಲಿ ಎದುರಾಗುವ ಸಾಧಕ-ಬಾಧಕ ಅಧ್ಯಯನ ನಡೆಸಿ ಸರಿಪಡಿಸುವುದರ ಜತೆಗೆ ಹೊಸ ಸಾಧ್ಯತೆಗಳ ಬಗ್ಗೆಯೂ ಯೋಚಿಸಲಾಗುವುದು. ಬಳಿಕ ಇತರೆ ಇತರೆ ವಲಯಗಳಿಗೂ ಈ ಮನೆ ಬಾಗಿಲಿಗೆ ಶಾಲೆ ಯೋಜನೆ ವಿಸ್ತರಿಸುವುದಾಗಿ ಹೇಳಿದರು.
 
10 ಸಂಚಾರಿ ಶಾಲೆ ಸಿದ್ಧ
 
ಕೊಳಗೇರಿ ಹಾಗೂ ವಲಸಿಗರುವ ಸ್ಥಳಗಳಿಗೆ ತೆರಳಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪಾಲಿಕೆ .40 ಲಕ್ಷ ವೆಚ್ಚದಲ್ಲಿ ಬಿಎಂಟಿಸಿಯಿಂದ 10 ಬಸ್‌ ಖರೀದಿಸಿದೆ. ಈ ಬಸ್‌ಗಳಲ್ಲಿ ಆಸನಗಳನ್ನು ಕಳಚಿ ಶಾಲಾ ಕೊಠಡಿಯ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಬಸ್‌ಗಳಲ್ಲಿ ಬೋರ್ಡ್‌, ಮಕ್ಕಳ ಸ್ನೇಹಿ ಚಿತ್ರಗಳು, ಕುಡಿಯುವ ನೀರಿನ ವ್ಯವಸ್ಥೆ, ಲೇಖನ ಸಾಮಗ್ರಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಪಾಠಗಳು ನಡೆಯಲಿವೆ. ಒಂದು ಸಂಚಾರಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಹಾಗೂ ಆಯಾ ಸೇರಿ ಮೂವರು ಸಿಬ್ಬಂದಿ ಇರಲ್ಲಿದ್ದಾರೆ. ಸದ್ಯಕ್ಕೆ ಈ 10 ಬಸ್‌ಗಳನ್ನು ಪಾಲಿಕೆ ಆವರಣದಲ್ಲಿ ನಿಲ್ಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಸಚಿವ ಅರಗ ಜ್ಞಾನೇಂದ್ರ ಅಧಿಕಾರವಹಿಸಿಕೊಂಡ ಮೊದಲ ವರ್ಗಾವಣೆ ಪಟ್ಟಿ ಬಿಡುಗಡೆ