Select Your Language

Notifications

webdunia
webdunia
webdunia
webdunia

ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆಗೆ ಸೂಚನೆ

Homicidal Tiger Captured, Minister Ishwar B. Khandre, notice for DNA test

Sampriya

ಬೆಂಗಳೂರು , ಭಾನುವಾರ, 9 ನವೆಂಬರ್ 2025 (12:23 IST)
Photo Credit X
ಬೆಂಗಳೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ. ಖಂಡ್ರೆ ತಿಳಿಸಿದ್ದಾರೆ. 

ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿ.ಎನ್.ಎ. ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.  

ಬಂಡೀಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳ ಜೊತೆಗೆ ಇತರ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ಹುಲಿ ಸೆರೆ ಕಾರ್ಯಾಚರಣೆಲ್ಲಿ ಭಾಗಿಯಾಗಿ ಹುಲಿಯನ್ನು ಹಿಡಿದಿದ್ದಾರೆ. ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಗಂಡು ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಈಶ್ವರ ಖಂಡ್ರೆ ವಿವರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather:ರಾಜ್ಯದಾದ್ಯಂತ ಒಣ ಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ