Select Your Language

Notifications

webdunia
webdunia
webdunia
Sunday, 30 March 2025
webdunia

ಹನಿಟ್ರ್ಯಾಪ್‌, ನೈತಿಕತೆಯಿಲ್ಲದ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ: ಬಸವರಾಜ ಬೊಮ್ಮಾಯಿ

Honey Trap Case, EX Chief Minister Basavaraj Bommaiah, Karnataka Congress Government

Sampriya

ನವದೆಹಲಿ , ಶುಕ್ರವಾರ, 21 ಮಾರ್ಚ್ 2025 (16:07 IST)
Photo Courtesy X
ನವದೆಹಲಿ: ಸದ್ಯ ರಾಜ್ಯರಾಜಕಾರಣದಲ್ಲಿ ಎದ್ದಿರುವ ಹನಿಟ್ರ್ಯಾಪ್ ಪ್ರಕರಣವನ್ನು ಸರ್ಕಾರ ಕೂಲಂಕುಷವಾಗಿ ತನಿಖೆ ಮಾಡಿ, ಇದರ ಹಿಂದೆ ಯಾರಿದ್ದಾರೆಯೋ ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕು  ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಈಚೆಗೆ ಸದನದಲ್ಲಿ ಕಾಂಗ್ರೆಸ್ ಸಚಿವ ರಾಜಣ್ಣ ಅವರುನ್ನು ತನ್ನ ಮೇಲೆ ಹನಿಟ್ರ್ಯಾಪ್ ನಡೆದಿದೆ. ಅದಲ್ಲದೆ ರಾಜ್ಯದ 48ಗಣ್ಯ ವ್ಯಕ್ತಿಗಳನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿದಲಾಗಿದೆ ಎಂದರು. ಈ ವಿಚಾರ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹನಿ ಟ್ರ್ಯಾಪಿಂಗ್ ವಿಷಯವನ್ನು ಕಾಂಗ್ರೆಸ್‌ನ ಹಿರಿಯ ಶಾಸಕರು ಮತ್ತು ಕ್ಯಾಬಿನೆಟ್ ಸಚಿವರೊಬ್ಬರು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿ, ಹನಿ ಟ್ರ್ಯಾಪಿಂಗ್ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ನಿನ್ನೆ ಗೃಹ ಸಚಿವರು ಈ ವಿಷಯದ ಬಗ್ಗೆ ತನಿಖೆ ನಡೆಸುವುದಾಗಿ ಘೋಷಿಸಿದರು, ಆದರೆ ಸಂಜೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಹನಿ ಟ್ರ್ಯಾಪಿಂಗ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಮಗೆ ಬಂದಿಲ್ಲ ಎಂದು ಹೇಳಿದರು.

ಇದರರ್ಥ ಕಾಂಗ್ರೆಸ್ ಈ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಆದೇಶಿಸುವುದು ಮುಖ್ಯಮಂತ್ರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಕರನ ಜತೆ ಸೇರಿ ಸ್ಪೋ ಪಾಯಿಸನ್ ನೀಡಿ ಪತಿಯ ಕೊಲೆ ಪ್ರಕರಣ: ರೀಲ್ಸ್‌ ರಾಣಿಗೆ ಸಿಗದ ಜಾಮೀನು