Select Your Language

Notifications

webdunia
webdunia
webdunia
webdunia

ಹನಿಟ್ರಾಪ್‌, ಯಾರಾದರೂ ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

Honey Trap Case, DCM DK Shivkumar, Karnataka Congress Government

Sampriya

ಮಡಿಕೇರಿ , ಶುಕ್ರವಾರ, 21 ಮಾರ್ಚ್ 2025 (16:46 IST)
ಮಡಿಕೇರಿ: 'ಸುಮ್ಮನೆ ಹನಿಟ್ರ್ಯಾಪ್ ಮ ಮಾಡುವವರು ನಿಮ್ಬಳಿ ಬರುತ್ತಾರೆಯೇ? ಯಾರಾದರೂ ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ.  ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ?' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಯಾರು ಹೇಳಿದ್ದರು ರಕ್ಷಣೆಯುಲ್ಲವೆಂದು ಎಂದು ಮರು ಪ್ರಶ್ನಿಸಿದರು.

ಹನಿಟ್ರ್ಯಾಪ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ ಕೈವಾಡವಿದೆ ಎಂಬ ಶಾಸಕ ಮುನಿರತ್ಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು 'ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ ಎಂದು ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ ಎಂದು ವ್ಯಂಗ್ಯವಾಡಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಬಂದ್ ಅಂತ ಸಾರ್ವಜನಿಕರ ಆಸ್ತಿಗೆ ಡ್ಯಾಮೇಜ್ ಮಾಡಿದ್ರೋ ಕಾದಿದೆ ಶಿಕ್ಷೆ