Publish Date: Mon, 21 Oct 2019 (18:24 IST)
Updated Date: Mon, 21 Oct 2019 (18:27 IST)
ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಪೊಲೀಸ್ ಹುತಾತ್ಮ ದಿನಾಚರಣೆ ಆಚರಣೆ ಮಾಡಲಾಗಿದೆ.
ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಹಳೆ ಸಿ.ಆರ್. ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ ನಡೆಯಿತು.
ಕರ್ತವ್ಯ ನಿರತ ಪೊಲೀಸರಿಗೆ ಹೆಚ್ಚಿನ ಸಾಮಾಜಿಕ ಭದ್ರತೆ ನೀಡಿ ಅವರ ಜೀವನ ಮಟ್ಟ ಸುಧಾರಿಸುವ ಕೆಲಸವಾಗಬೇಕು. ಹೀಗಂತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಎಚ್. ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಹೇಳಿದ್ರು.
ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿ, ಸಮಾಜದ ಸ್ವಾಸ್ಥ್ಯ ರಕ್ಷಣೆಯಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದ್ರು.