Select Your Language

Notifications

webdunia
webdunia
webdunia
webdunia

ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ: ಆರ್ ಅಶೋಕ್‌ ನಡೆಗೆ ಕಾಂಗ್ರೆಸ್ ಆಕ್ರೋಶ

Karnataka KSRTC Bus Ticket Hike, BJP Leaders Protest, Opposition Leader R Ashok,

Sampriya

ಬೆಂಗಳೂರು , ಶುಕ್ರವಾರ, 3 ಜನವರಿ 2025 (17:31 IST)
ಬೆಂಗಳೂರು: ಆರ್ ಅಶೋಕ್‌ ಅವರೇ, ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ-___ ಅನ್ನೋದು ಎಷ್ಟು ಸರಿ, ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬಸ್ ದರ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆಗೆ ಮುಂದಾಗಿದ್ದರು.  ಈ ವೇಳೆ ಆರ್‌ ಅಶೋಕ್‌ ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಡೆದಿದೆ. ಮಾತ್ರವಲ್ಲ ಏಕವಚನದಲ್ಲಿ ಕೆಟ್ಟ ಪದಗಳ ಮೂಲಕ ನಿಂದಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾನ ಎಕ್ಸ್‌ನಲ್ಲಿ ಕಾಂಗ್ರೆಸ್‌ ಆಕ್ರೋಶ ಹೊರಹಾಕಿದೆ.' ಅಶೋಕ್ ಅವರೇ ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ-___ ಅನ್ನೋದು ಎಷ್ಟು ಸರಿ? ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ?

ನಾಲಿಗೆ ಸಂಸ್ಕಾರ ಹೇಳುತ್ತದೆ, ಸಿಟಿ ರವಿ ನಂತರ ಈಗ ನಿಮ್ಮ ಸರದಿಯೇ? ನೀವು ವಿರೋಧಪಕ್ಷ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ.

ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು ನಿಂದ ತೊಳೆಯಬೇಕು

Share this Story:

Follow Webdunia kannada

ಮುಂದಿನ ಸುದ್ದಿ

ಆಟೋ ಚಾಲಕನ ಅನುಮಾನಾಸ್ಪದ ವರ್ತನೆ: ಭಯಗೊಂಡು ಮಹಿಳೆ ಮಾಡಿದ್ದೇನು ಗೊತ್ತಾ