ನಿಂತಿದ್ದ ಲಾರಿಗೆ ಓಮ್ನಿ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಅಥಣಿ ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಕಾಗವಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟೈರ್ ಪಂಚರಾಗಿದ್ದರಿಂದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಈ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇನ್ನುವರೆಗು ಮೃತರ ಗುರುತು ಪತ್ತೆಯಾಗಿಲ್ಲ.
ಘಟನೆಯಿಂದ 2 ಗಂಟೆಗಳ ಕಾಲ ಚಿಕ್ಕೋಡಿ ಮತ್ತು ವಿಜಯಪುರ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿತ್ತು.
ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.