ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದುರ್ಮರಣವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕಿನ ಮಧುಗಿರಿ ಕೊಪ್ಪಲು ಬಳಿ ನಡೆದಿದೆ.
ವಿರಾಜಪೇಟೆಯಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಎದುರುಗಡೆಯಿಂದ ಬರುತ್ತಿದ್ದ ಅಕ್ಕಿ ಚೀಲ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಮೃತ ಐವರಲ್ಲಿ ಬಸ್ ಚಾಲಕ, ನಿರ್ವಾಹಕ, ಲಾರಿ ಚಾಲಕ ಕೂಡ ಸೇರಿದ್ದಾರೆ. ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ 10 ಜನರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಬಸ್ ಚಾಲಕನನ್ನು ಕೆ ಆರ್ ನಗರದ ಸದಾಶಿವ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ಮುಂದುವರೆದಿದೆ.
ಎರಡು ವಾಹನಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು ಪ್ರಕರಣದ ಭೀಕರತೆಗೆ ಸಾಕ್ಷಿಯಾಗಿದೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ