ಕನ್ಯೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

Sampriya
ಶುಕ್ರವಾರ, 6 ಡಿಸೆಂಬರ್ 2024 (19:48 IST)
Photo Courtesy X
ವಿಜಯಪುರ: ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.

ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿಗೆ ತೊಗರಿ ಕಟಾವು ಮಷಿನ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ. ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50) ಹಾಗೂ ದಿಲೀಪ್ ಪಾಟೀಲ್ (45) ಮೃತರು.


ಮೃತರಾದ ಐವರು ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಲು ಹೋಗಿದ್ದು, ವಾಪಸ್ ಆಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಕ್ರೂಸರ್ ಓವರ್ ಟೇಕ್ ಮಾಡುವ ಭರದಲ್ಲಿ ತೊಗರಿ ಕಟಾವು ಮಷಿನ್​​ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಘಟನಾ ಸ್ಥಳದಲ್ಲಿ ಟ್ರಾಫಿಕ್‌ಜಾಮ್​ ಉಂಟಾಗಿತ್ತು. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments