ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ; 6 ಮಂದಿ ದುರ್ಮರಣ

ಗುರುವಾರ, 12 ಸೆಪ್ಟಂಬರ್ 2019 (11:13 IST)
ಮುಂಬೈ : ಮಹಾರಾಷ್ಟ್ರದ ಸಾತಾರಾ ನಗರದ  ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಮುಂಬೈ ನಗರದಿಂದ ಬೆಳಗಾವಿಗೆ ಬರುತ್ತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಚಾಲಕನ ನಿರ್ಲಕ್ಷದಿಂದ ಮುಂದೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದು, 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

 

ಮೃತರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಐಎಂಎ ಬಹುಕೋಟಿ ರೂ.ವಂಚನೆ ಪ್ರಕರಣ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮನ್ಸೂರ್ ಖಾನ್