Select Your Language

Notifications

webdunia
webdunia
webdunia
webdunia

ಸಿಎಂ ಗದ್ದುಗೆಗಾಗಿ ಮನಿ ಪವರ್ ಬಳಸಿ ಕುದುರೆ ವ್ಯಾಪಾರ: ಪ್ರಹ್ಲಾದ್ ಜೋಶಿ

ಕರ್ನಾಟಕ ಮುಖ್ಯಮಂತ್ರಿ ಹುದ್ದೆ

Sampriya

ಹುಬ್ಬಳ್ಳಿ , ಭಾನುವಾರ, 13 ಜುಲೈ 2025 (18:44 IST)
ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂದು ಶಾಸಕರು ತಮ್ಮ ಪರವಾಗಿದ್ದಾರೆ ಎಂದು ತೋರಿಸಿಕೊಳ್ಳಲು ಮನಿ ಪವರ್‌ ಬಳಸಿ ಕುದುರೆ ವ್ಯಾಪಾರಕ್ಕೆ ಇಳಿದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

55 ಶಾಸಕರ ಪಟ್ಟಿ ಹಿಡಿದುಕೊಂಡು ಬಿಜೆಪಿ ಇಡಿ ಹೆಸರಲ್ಲಿ ಬೆದರಿಕೆಯೊಡ್ಡಿ ಆಪರೇಷನ್‌ ಕಮಲಕ್ಕೆ ಮುಂದಾಗಿದೆ ಎನ್ನುವ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ್‌ ಹೇಳಿಕೆಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಅವರದ್ದೇ ಶಾಸಕರ ಖರೀದಿ ನಡೆಯುತ್ತಿದೆ. ಇದು ಹೊರಗೆ ಬರಬಾರದು ಎಂದು, ಜನತೆಯ ದಿಕ್ಕುತಪ್ಪಿಸಲು ಕಾಶಪ್ಪನವರ್‌ ಸುಳ್ಳು ಆರೋಪ ಮಾಡಿದ್ದಾರೆ. ಅವ್ಯವಹಾರ ನಡೆಸಿದವರು ಮಾತ್ರ ಇಡಿ(ಜಾರಿ ನಿರ್ದೇಶನಾಲಯ) ದಾಳಿಗೆ ಹೆದರಬೇಕು. ಕಾಶಪ್ಪನವರ್‌ ಅಂತಹ ತಪ್ಪು ಏನು ಮಾಡಿದ್ದಾರೆ’ ಎಂದು ಪ್ರಶ್ನೆ ಮಾಡಿದರು.

ಡಿ.ಕೆ. ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಕ್ಕೆ, ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟಗಳು ನಡೆಯುತ್ತಿದೆ. 

ಒಬ್ಬರಿಗೊಬ್ಬರು ಸ್ಪರ್ಧೆಗೆ ಜಾರಿರುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮ ಸಾಮರ್ಥ್ಯ ಹೈಕಮಾಂಡ್‌ ಎದುರು ಪ್ರದರ್ಶಿಸಲು ಹಣ ನೀಡಿ ಶಾಸಕರನ್ನು ಖರೀದಿಸುತ್ತಿದ್ದಾರೆ. ಅವರಲ್ಲಿ ವ್ಯಾಪಾರ ಮಾಡುವವರು ಮತ್ತು ಕೊಳ್ಳುವವರು ಬಲಾಢ್ಯರಾಗಿದ್ದಾರೆ. ವ್ಯಾಪಾರಕ್ಕೂ ಕುದುರೆಗಳು ಮತ್ತು ವಸ್ತುಗಳು ಸಿದ್ಧವಾಗಿ, ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿವೆ ಎಂದು ವ್ಯಂಗ್ಯ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಪಬ್‌ಗಳ ಮೇಲೆ ದಾಳಿ: 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜತೆ ವಿದೇಶಿ ಪೆಡ್ಲರ್‌ಗಳು ವಶಕ್ಕೆ