Daily Horoscope

Select Your Language

Notifications

webdunia
webdunia
webdunia
webdunia

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

Hosahalli To Kabban Park Metro
ಬೆಂಗಳೂರು: ಮೇ 17ರಂದು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್‌ ಎಂ ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆ ಹೊಸಹಳ್ಳಿ ಕಬ್ಬನ್ ಪಾರ್ಕ್‌ ಮೆಟ್ರೋ ಸ್ಥಗಿತ ಮಾಡಲಾಗಿದೆ.  

ಈ ಹಿನ್ನೆಲೆ  ಬೆಳಿಗ್ಗೆ 7ರಿಂದ 9ರವರೆಗೆ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಈ ಮಾರ್ಗದಲ್ಲಿ ಚಲ್ಲಘಟ್ಟದಿಂದ ವಿಜಯನಗರವರೆಗೆ, ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್‌ವರೆಗೆ (ಕಾಡುಗೋಡಿ) ಸಂಚಾರ ಎಂದಿನಂತೆ ಇರಲಿದೆ.

ಮಾದಾವರ – ರೇಷ್ಮೆ ಸಂಸ್ಥೆ ನಡುವಿನ ಹಸಿರು ಮಾರ್ಗದಲ್ಲಿ ಆರ್.ವಿ. ರಸ್ತೆ – ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಯಾವುದೇ ವ್ಯತ್ಯಯಗಳು ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ