Select Your Language

Notifications

webdunia
webdunia
webdunia
webdunia

ಯೋಗ ದಿನಾಚರಣೆಗೆ ತಟ್ಟಿದ ಪ್ರತಿಭಟನೆಯ ಬಿಸಿ

ಯೋಗ ದಿನಾಚರಣೆಗೆ ತಟ್ಟಿದ ಪ್ರತಿಭಟನೆಯ ಬಿಸಿ
bangalore , ಮಂಗಳವಾರ, 21 ಜೂನ್ 2022 (19:53 IST)
ಇಂದು ವಿಶ್ವದಾದ್ಯಂತ ನಡೆದ ಯೋಗ ದಿನಾಚರಣೆಯಲ್ಲಿ ಹಲವು ದೇಶದ ಸದಸ್ಯರು ಯೋಗ ಭಂಗಿಗಳನ್ನು ಪ್ರದರ್ಶಿಸಿದ್ದಾರೆ. ಅದರೆ, ಭಾರತೀಯ ಹೈಕಮಿಷನ್ ಆಯೋಜಿಸಿದ್ದ ಯೋಗ ದಿನಾಚರಣೆಗೆ ಪ್ರತಿಭಟನೆಯ ಬಿಸಿ ತಟ್ಟಿದೆ. 
 
 
ಮಾಲ್ಡೀವ್ಸ್ನ ರಾಜಧಾನಿ ಮಾಲೆಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ನುಗಿದ ಗುಂಪೊಂದು ಯೋಗ ಇಸ್ಲಾಂಗೆ ವಿರುದ್ದವಾದದ್ದು ಎಂದು ಆರೋಪಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದೆ. 
 
ಕಾರ್ಯಕ್ರಮಕ್ಕು ಮುನ್ನ ಕ್ರೀಡಾಂಗಣದ ಹೊರಗೆ ಬಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗಿದ ಸದಸ್ಯರು ಇದು ಒಂದು ಧರ್ಮ ದ್ರೋಹಿ ಕ್ರಿಯೆಯಾಗಿದೆ ಎಂದು ಆರೋಪಿಸಿದ್ದಾರೆ. 
 
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತೀಯ ರಾಯಭಾರಿ ಕಚೇರಿಯು ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿತ್ತು. ಸ್ಥಳಕ್ಕೆ ಆಗಮಿಸಿದ ಪ್ರತಿಭಟನಕಾರರು ಯೋಗ ಮಾಡುವುದನ್ನು ಕೂಡಲೇ ಕೈ ಬಿಟ್ಟು ತೆರಳುವಂತೆ ಬೆದರಿಕೆ ಹಾಕಿದ್ದಾರೆ ಎಂದು ನೆರೆದಿದ್ದವರು ಆರೋಪಿಸಿದ್ದಾರೆ. 
 
ಕಾರ್ಯಕ್ರಮದಲ್ಲಿ ಮಾಲ್ಡೀವ್ಸ್ ಸರ್ಕಾರ ಸಚಿವರು ಹಾಗು ಅಧಿಕಾರಿಗಳು ಭಾಗಿಯಾಗಿದ್ದರು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪ್ರತಿಭಟನಕಾರರು ಕಾರ್ಯಕ್ರಮಕ್ಕಾಗಿ ಹಾಕಿದ ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡುತ್ತಿರುವುದು ಕಂಡು ಬರುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್