ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಇನ್ಮುಂದೆ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಿಸಲು ಮೈಸೂರು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಹೀಗಾಗಿ ಇನ್ಮುಂದೆ ಹೋಟೆಲ್ ತಿಂಡಿ ತಿನಿಸುಗಳು ದುಬಾರಿಯಾಗಲಿವೆ. ಆಡುಗೆ ಅನಿಲ, ಖಾದ್ಯ ತೈಲ, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಹಿನ್ನೆಲೆ ಹೋಟೆಲ್ ನಡೆಸಲು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಏ.10ರಿಂದ ಶೇ.5ರಷ್ಟು ಊಟ, ತಿಂಡಿ ದರ ಹೆಚ್ಚಳ ಮಾಡಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಮಾಹಿತಿ ನೀಡಿದ್ದಾರೆ.