Webdunia - Bharat's app for daily news and videos

Install App

ಗೃಹ ಖಾತೆ ನಿಭಾಯಿಸಲಾಗದ ಜಿ. ಪರಮೇಶ್ವರ್ ರಾಜೀನಾಮೆ ಸಲ್ಲಿಸಲಿ: ಡಾ. ಅಶ್ವತ್ಥನಾರಾಯಣ್

G Parameshwar
Sampriya
ಗುರುವಾರ, 16 ಮೇ 2024 (16:56 IST)
Photo Courtesy X
ಬೆಂಗಳೂರು: ರಾಜ್ಯದ ಗೃಹ ಸಚಿವರಿಗೆ ಸೂಕ್ಷ್ಮತೆ, ಹಿರಿತನ ಇದ್ದರೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಇಲಾಖೆಯಲ್ಲಿ ಗರಿಷ್ಠ ಹಸ್ತಕ್ಷೇಪ ಇದೆ. ಗೃಹ ಸಚಿವರೂ ಸಂಪೂರ್ಣ ಅಸಹಾಯಕರಾಗಿದ್ದಾರೆ ಎಂದು ತಿಳಿಸಿದರು. ಯಾವ ಪೊಲೀಸ್ ಅಧಿಕಾರಿಗಳೂ ಬಿಗಿಯಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗದಂಥ ವ್ಯವಸ್ಥೆ ಇಲ್ಲಿದೆ ಎಂದು ಹೇಳಿದರು.

ಈ ಜಡತ್ವವನ್ನು ಹೋಗಲಾಡಿಸಿ ಸರಿಪಡಿಸಲು ಸರಕಾರ ಮುಂದಾಗಬೇಕಿದೆ. ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಕೊಡಬೇಕು. ಪರಿಹಾರ ಕೊಡಬಾರದ ಸಂದರ್ಭದಲ್ಲಿ ಈ ಸರಕಾರ ಪರಿಹಾರ ಕೊಟ್ಟಿದೆ. ಕಾನೂನು ಕ್ರಮವನ್ನು ಬಿಗಿಗೊಳಿಸಬೇಕು. ಗೃಹ ಸಚಿವರು ರಾಜೀನಾಮೆ ನೀಡಬೇಕು; ಸಿಎಂ, ಗೃಹ ಸಚಿವರ ರಾಜೀನಾಮೆ ಪಡೆದುಕೊಳ್ಳಲಿ ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಒಂದು ವರ್ಷದ ಅವಧಿಯಲ್ಲಿ ಇಡೀ ಕರ್ನಾಟಕದಲ್ಲಿ ಕೊಲೆ, ಸುಲಿಗೆ, ಮತಾಂಧ ಶಕ್ತಿಗಳ ವಿಜೃಂಭಣೆ, ತುಷ್ಟೀಕರಣದ ರಾಜಕಾರಣ ಸೇರಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಅವರು ಆರೋಪಿಸಿದರು.

ಈ ಅಸಮರ್ಥ ಸರಕಾರವು ಶೂನ್ಯ ಅಭಿವೃದ್ಧಿಯ ಸರಕಾರ ಎಂದು ಟೀಕಿಸಿದರು. ಆಡಳಿತದಲ್ಲಿ ಈ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಭ್ರಷ್ಟಾಚಾರದ ದಂಧೆ, ವರ್ಗಾವಣೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುವುದು ಜಗಜ್ಜಾಹೀರಾದ ವಿಚಾರ ಎಂದು ಆಕ್ಷೇಪಿಸಿದರು.

ವರ್ಗಾವಣೆ, ಹುದ್ದೆ ನಿಗದಿಗೆ ಈ ಸರಕಾರದಲ್ಲಿ ರೇಟ್ ಕಾರ್ಡ್ ನಿಗದಿಯಾಗಿದೆ. ಸಿಎಂ ಕಚೇರಿಯಿಂದ ವಿವಿಧ ಕಚೇರಿಗಳು, ಶಾಸಕರು- ಎಲ್ಲರೂ ಮಧ್ಯಸ್ಥಿಕೆ ವ್ಯಕ್ತಿಗಳ ಜೊತೆಗೂಡಿದ ಕಾರಣ ಕಾನೂನು- ಸುವ್ಯವಸ್ಥೆ ಕಾಪಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿಟಿ ಕ್ರೈಮ್ ಬ್ಯೂರೋ ಮತ್ತು ನ್ಯಾಷನಲ್ ಕ್ರೈಮ್ ಬ್ಯೂರೋ ಪ್ರಕಾರ ಅಪರಾಧ ಪ್ರಮಾಣ ಶೇ 60ಕ್ಕಿಂತ ಹೆಚ್ಚಾಗಿದೆ ಎಂದು ಆರೋಪಿಸಿದರು.

ಹೆಣ್ಮಕ್ಕಳಿಗಂತೂ ಸುರಕ್ಷತೆ ಇಲ್ಲ. ನೇಹಾ ಕೊಲೆ ಬಳಿಕ ಅಂಜಲಿ ಹತ್ಯೆ ನಡೆದಿದೆ. ಇವತ್ತು ಬೆಳಿಗ್ಗೆ ಸುಬ್ರಹ್ಮಣ್ಯಪುರದಲ್ಲಿ ಇನ್ನೊಂದು ಕೊಲೆ ನಡೆದಿದೆ. ಅಂಜಲಿ ಮನೆಯವರು ಈ ಯುವತಿಗೆ ಬೆದರಿಕೆ ಕುರಿತು ಠಾಣೆಗೆ ತಿಳಿಸಿದ್ದರೂ ಸಹ ಕ್ರಮ ವಹಿಸಲು ವಿಫಲವಾಗಿದ್ದಾರೆ. ಭಂಡ ಸರಕಾರ ಎಲ್ಲ ಸೂಕ್ಷ್ಮತೆಯನ್ನು ಕಳಕೊಂಡಿದೆ ಎಂದು ತಿಳಿಸಿದರು.

ನಾವು ಭಂಡರು, ಅಸಮರ್ಥರು ಎಂಬಂತೆ ಈ ಸರಕಾರ ವರ್ತಿಸುತ್ತಿದೆ. ಅನುಭವಿ ಸಿಎಂ, ಸಚಿವರು ಉತ್ತಮ ಆಡಳಿತ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ತಿಳಿಸಿದರು. ಜನಪರವಾಗಿ ಸರಕಾರ ಕಾರ್ಯನಿರ್ವಹಿಸುವಂತೆ ಮಾಡಲು ಬಿಜೆಪಿ ಪ್ರತಿಭಟನೆಗಳನ್ನು ಸಂಘಟಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ರಾಜ್ಯ ವಕ್ತಾರ ಎಂ.ಜಿ.ಮಹೇಶ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪ್ರಮುಖರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Gold Price today: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ, ಇಂದು ಎಷ್ಟಾಗಿದೆ ನೋಡಿ

Pehalgam terror attack: ಭಾರತೀಯ ಯೋಧರನ್ನು ಕಂಡರೂ ಭಯದಿಂದ ಅತ್ತ ಪ್ರವಾಸಿಗರ ಕರುಳು ಹಿಂಡುವ ವಿಡಿಯೋ ಇಲ್ಲಿದೆ ನೋಡಿ

Pehalgam: ಸೌದಿ ಅರೇಬಿಯಾ ಪ್ರವಾಸ ಬೇಡ, ದೇಶವೇ ಮುಖ್ಯ: ಪ್ರಧಾನಿ ಮೋದಿ ದೇಶಕ್ಕೆ ವಾಪಸ್, ಇಂದು ಮಹತ್ವದ ಮೀಟಿಂಗ್

Pehalgam terror attack: ಕನ್ನಡಿಗರ ರಕ್ಷಣೆಗೆ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿ ಪರದಾಟ

ಮುಂದಿನ ಸುದ್ದಿ
Show comments