Select Your Language

Notifications

webdunia
webdunia
webdunia
webdunia

ಮಹಿಳಾ ಟೆಕ್ಕಿಗಳ ನಗ್ನ ವಿಡಿಯೋ ಚಿತ್ರಿಕರಿಸುತ್ತಿದ್ದ ಹೌಸ್ ಕೀಪರ್ ಅರೆಸ್ಟ್

ಸಾಫ್ಟ್‌ವೇರ್ ಕಂಪೆನಿ
24 ವರ್ಷದ ವ್ಯಕ್ತಿಯೊಬ್ಬ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗಳ ಫೋಟೋ ಮತ್ತು ವಿಡಿಯೋಗಳನ್ನು ತೆಗೆಯುತ್ತಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಇಂದಿರಾನಗರದಲ್ಲಿರುವ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯಲ್ಲಿ ಆಫೀಸ್ ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ಉತ್ತರಪ್ರದೇಶ ಮೂಲದ ಧರ್ಮೇಂದ್ರ ಕುಮಾರ್ ಯಾದವ್ ಮಹಿಳಾ ಉದ್ಯೋಗಿಗಳ ನಗ್ನ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದ, ಮಹಿಳಾ ಶೌಚಾಲಯದಲ್ಲೂ ರಹಸ್ಯ ಕ್ಯಾಮರಾ ಅಳವಡಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಆರೋಪಿ ಧರ್ಮೆಂದ್ರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರಿಂದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಆತನ ಮೊಬೈಲ್ ಫೋನ್‌ನಲ್ಲಿ ಹಲವಾರು ಯುವತಿಯರ ನಗ್ನ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧ: ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಪೊಲೀಸ್ ಅಧಿಕಾರಿಣಿ