Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಕಾವಿ ಬಟ್ಟೆ ಹಾಕುವವರ ಮೇಲೆ ಯಾಕಷ್ಟು ಕೋಪ: ರೇಣುಕಾಚಾರ್ಯ ಆಕ್ರೋಶ

Sampriya
ಶನಿವಾರ, 14 ಡಿಸೆಂಬರ್ 2024 (18:00 IST)
Photo Courtesy X
ದಾವಣಗೆರೆ: ಬೆಳಗಾವಿಯಲ್ಲಿ  ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿಬಾರ್ ಮಾಡಲು ಸಂಚು ಮಾಡಲಾಗಿತ್ತು. ಈ ಮೂಲಕ ಸ್ವಾಮೀಜಿಯನ್ನು ಮುಗಿಸಲು ಪ್ಲ್ಯಾನ್ ನಡೆದಿತ್ತು ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಈ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್‍ನ್ನು ಖಂಡಿಸಬೇಕು. ಇಲ್ಲವಾದಲ್ಲಿ ನಮಗೂ ಕೂಡ ಉಳಿಗಾಲವಿಲ್ಲದಂತಾಗುತ್ತದೆ . ನಾವು ಪಂಚಮಸಾಲಿ ಸಮುದಾಯದ ಜತೆಗೆ ಯಾವಾಗಲೂ ಇದ್ದೇವೆ. ಇವರ ಮೇಲಿನ ದಾಳಿಯನ್ನು ಎಲ್ಲ ಮಠಾಧೀಶರು ಖಂಡಿಸಬೇಕೆಂದರು.

ಇನ್ನೂ ಲಾಠಿ ಚಾರ್ಜ್‌ ವಿಚಾರವಾಗಿ ಹಗುರವಾಗಿ ಮಾತನಾಡಿದ ಗೃಹಮಂತ್ರಿ ಜಿ ಪರಮೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯ ಮಾಡಿದರು.

ಆರ್‍ಎಸ್‍ಎಸ್‍ನವರು ಹೋರಾಟದಲ್ಲಿ ಕಲ್ಲು ತೂರಿದ್ದಾರೆ ಎಂಬ ಖಾಶಪ್ಪನವರ ಹೇಳಿಕೆ ವಿಚಾರವಾಗಿ, ಹೋರಾಟ ಹತ್ತಿಕ್ಕಲು ಅವರೇ ಕಲ್ಲು ತೂರಿರಬಹುದು. ಅಧಿಕಾರದ ಪಿತ್ತ ನೆತ್ತಿಗೇರಿ ಈ ರೀತಿ ಮಾತನಾಡುತಿದ್ದಾರೆ. ನಮ್ಮ ಸರ್ಕಾರ ಇರುವ ಸಮಯದಲ್ಲಿ ಒಂದು ಕೂಡ ಅಹಿತಕರ ಘಟನೆ ನಡೆಯಲಿಲ್ಲ. ನೀವು ಈ ರೀತಿ ಮಾತನಾಡೋದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ವ್ಯಾಮೋಹ ಜಾಸ್ತಿಯಾಗಿದ್ದು, ಕಾವಿ ಬಟ್ಟೆ ಹಾಕುವವರ ಮೇಲೆ ಯಾಕಿಷ್ಟು ಕೋಪ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments