Select Your Language

Notifications

webdunia
webdunia
webdunia
webdunia

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

Mysore Dussehra, Booker Laureate Banu Mushtaq, Chief Minister Siddaramaiah

Sampriya

ಮೈಸೂರು , ಭಾನುವಾರ, 24 ಆಗಸ್ಟ್ 2025 (14:14 IST)
Photo Credit X
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಬುಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಏಕೈಕ ಸಾಹಿತಿಗೆ ಗೌರವ ನೀಡಲಾಗಿದೆ. ಅದರ ಬೆನ್ನಲ್ಲೇ ಮೈಸೂರು ದಸರಾ ಉದ್ಘಾಟಿನೆಗೆ ಆಯ್ಕೆ ಮಾಡಿರುವುದು ತುಂಬಾ ಸಂತಸವಾಗಿದೆ ಎಂದು ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದರು. 

ಆದರೆ, ಬಾನು ಮುಷ್ತಾಕ್ ಅವರ ಆಯ್ಕೆಗೆ ಕೆಲ ಹಿಂದೂ ಸಂಘಟನೆ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಸಹ ತಕರಾರು ತೆಗೆದಿದ್ದಾರೆ.

ಮೈಸೂರು ದಸರಾ ಶೇ 100ರಷ್ಟು ಧಾರ್ಮಿಕ ಆಚರಣೆ, ನವರಾತ್ರಿ ಉತ್ಸವ ನಡೆಯುತ್ತದೆ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ. ಸಾಹಿತಿ ಬಾನು ಮುಷ್ತಾಕ್ ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಅವರು ಪ್ರಶ್ನಿಸುತ್ತಾರೆ ಪ್ರಶ್ನಿಸಿದ್ದಾರೆ.

ಬಾನು ಮುಷ್ತಾಕ್‌ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕಾರರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ಮಹಾರಾಜರ ಪರಂಪರೆಯನ್ನು ಸಿಎಂ ಹೀಗೆ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌