ತಾಯಿ-ಮಕ್ಕಳಿಬ್ಬರಿಗೆ ದುರಂತ ಸಾವು ಬಂದಿದ್ದು ಹೇಗೆ?

Webdunia
ಸೋಮವಾರ, 10 ಜೂನ್ 2019 (19:44 IST)
ತಾಯಿ ಹಾಗೂ ಆಕೆಯ ಮಕ್ಕಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಟ್ಟೆತೊಳೆಯಲು ಹೋಗಿದ್ದ ಗೃಹಿಣಿಯೊಬ್ಬಳು ತನ್ನ ಮಕ್ಕಳೊಂದಿಗೆ ಸಾವನ್ನಪ್ಪಿದ್ದಾಳೆ. ಮೊದಲಿಗೆ ಕಾಲು ಜಾರಿ ಮಗನೊಬ್ಬ ಬಾವಿಗೆ ಬೀಳುತ್ತಿದ್ದ. ಆತನನ್ನು ರಕ್ಷಿಸಲು ಹೋಗಿ ಆಯತಪ್ಪಿ ಮತ್ತೊಬ್ಬ ಮಗನೊಂದಿಗೆ ಬಾವಿಯಲ್ಲಿ ಬಿದ್ದು ತಾಯಿಯೂ ಮೃತಪಟ್ಟಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲೆಯ ತಿಪ್ಪೆನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವಿಜಯಲಕ್ಷ್ಮೀ (30), ಆಕೆಯ ಪುತ್ರ ಅಜಯ್ (10) ಹಾಗೂ ಪುತ್ರಿ ಧನಲಕ್ಷ್ಮೀ (8) ಸಾವನ್ನಪ್ಪಿದ್ದಾರೆ.

ತಿಪ್ಪೆನಹಳ್ಳಿಯ ನಾಗರಾಜ್ ಎಂಬುವರೊಂದಿಗೆ 11 ವರ್ಷಗಳ ಹಿಂದೆ ವಿಜಯಲಕ್ಷ್ಮೀ ಮದುವೆಯಾಗಿದ್ದರು. ಬಟ್ಟೆ ಒಗೆಯಲು ತನ್ನಿಬ್ಬರು ಮಕ್ಕಳೊಂದಿಗೆ ತೋಟದ ಬಾವಿಗೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ತೋಟದ ಬಾವಿಗೆ ಹೋದ ಮಡದಿ, ಮಕ್ಕಳು ಎಷ್ಟು ಹೊತ್ತು ಆದರೂ ಬಾರದ ಕಾರಣ ಬಾವಿ ಹತ್ತಿರ ಹೋಗಿ ಪತಿ ನಾಗರಾಜ್ ನೋಡಿದಾಗ ಮೂವರು ಸಾವನ್ನಪ್ಪಿರುವುದು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಮುಂದಿನ ಸುದ್ದಿ
Show comments