Publish Date: Wed, 09 Jan 2019 (15:30 IST)
Updated Date: Wed, 09 Jan 2019 (15:32 IST)
ಭಾರತ ಬಂದ್ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮುಂಡಗೋಡ ಪಟ್ಟಣದಲ್ಲಿ ಭಾರತ ಬಂಧ ಹಿನ್ನಲೆಯಲ್ಲಿ ರಾಜ್ಯ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕಾ ಘಟಕದ ನೇತೃತ್ವದ ವಿವಿಧ ಸಂಘಟನೆ ಪ್ರತಿಭಟನಾ ಮೆರವಣಿಗೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿದ್ದಾಳೆ.
ಶಾಂತಾ ಚಕ್ರಸಾಲಿ(55) ಮೃತಪಟ್ಟ ಮಹಿಳೆಯಾಗಿದ್ದಾಳೆ. ಇವರು ತಾಲೂಕಿನ ಶಿಡ್ಲಗುಂಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿದ್ದರು. ಪ್ರತಿಭಟನಾ ಮೆರವಣಿಗೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ಮುಂದೆ ಕುಸಿದು ಬಿದ್ದರು. ತಕ್ಷಣವೇ ಹತ್ತಿರವಿದ್ದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಸಾವನ್ನಪ್ಪಿದ್ದರು.