ಬಾಲಕಿ ಮೇಲೆ ಅತ್ಯಾಚಾರ ಯತ್ನ ಎಷ್ಟು ವರ್ಷ ಶಿಕ್ಷೆ?

Webdunia
ಭಾನುವಾರ, 13 ಫೆಬ್ರವರಿ 2022 (10:27 IST)
ಕಲಬುರಗಿ :  ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು 3 ವರ್ಷ ಶಿಕ್ಷೆ ಮತ್ತು 45 ಸಾವಿರ ರು. ದಂಡ ವಿಧಿಸಿದ್ದಾರೆ.

2020ರಲ್ಲಿ ರಾತ್ರಿ ಮಹಿಳೆಯೊಬ್ಬರು ತನ್ನ 4 ವರ್ಷದ ಮಗಳನ್ನು ಕರೆದುಕೊಂಡು ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಲಗಿದ್ದರು. ಬೆಳಗಿನ ಜಾವ ಪ್ರವೀಣ್ ಹಿರೇಮಠ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ.

ಬಾಲಕಿ ಅಳುವ ಶಬ್ಧ ಕೇಳಿ ತಾಯಿ ಮಗುವನ್ನು ರಕ್ಷಿಸಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಈ ದೂರಿನ ಅನ್ವಯ ಸಿಪಿಐ ಕಪೀಲದೇವ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಸಲ್ಲಿಸಿದ್ದರು. ಬ್ರಹ್ಮಪುರ ಪೊಲೀಸ್ ಮುಖ್ಯಪೇದೆ ಸಂತೋಷಕುಮಾರ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು ಅಪರಾಧಿಗೆ 3 ವರ್ಷ ಶಿಕ್ಷೆ ಹಾಗೂ 45 ಸಾವಿರ ರು. ದಂಡ ವಿಧಿಸಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ಪರಿಹಾರ ಹಾಗೂ ದಂಡದ ಹಣದಲ್ಲಿ 40 ಸಾವಿರ ಬಾಲಕಿಗೆ ಕೊಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments