Publish Date: Thu, 21 Mar 2019 (06:56 IST)
Updated Date: Thu, 21 Mar 2019 (06:58 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮಂಡ್ಯ ಡಿಸಿ ಕಚೇರಿಗೆ ಆಗಮಿಸಿದ ಸುಮಲತಾ ಅವರು 3 ಸೆಟ್‍ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ನಿಯಮಗಳಂತೆ ನಾಮಪತ್ರದೊಂದಿಗೆ ತಮ್ಮೊಂದಿಗೆ ಇದ್ದ ಹಣ, ಆಸ್ತಿ, ಸಂಪತ್ತಿನ ವಿವರದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದ್ದಾರೆ.
ಸುಮಲತಾ ಬಳಿ ಐದೂವರೆ ಕೆಜಿ ಚಿನ್ನ, 31 ಕೆಜಿ ಬೆಳ್ಳಿ ಹಾಗೂ 5 ಕೋಟಿ ರೂ. ಚರಾಸ್ತಿ, 17 ಕೋಟಿ ಸ್ಥಿರಾಸ್ತಿ ಸೇರಿ ಒಟ್ಟು 23 ಕೋಟಿ 41 ಲಕ್ಷ ರೂ. ಆಸ್ತಿ ಇದೆ. ಇದರ ಜೊತೆಯಲ್ಲಿ ಒಂದೂವರೆ ಕೋಟಿ ರೂ. ಸಾಲವೂ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ