ಸದಾಶಿವ ಆಯೋಗ ವರದಿ ಜಾರಿಗೆ ನಾವು ಕಮಿಟ್ ಆಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಬಿಜೆಪಿಯವ್ರು ಹಿಂದೆ 2% ಹಂಚಿಕೆ ಮಾಡಿದ್ದಾರೆ ಆದರೆ ಅವರ ಕೇಂದ್ರ ಮಂತ್ರಿ ನಾರಾಯಣಸ್ವಾಮಿಯೇ ಇದು ಸಾಧ್ಯವಿಲ್ಲ ಅಂತ ಹೇಳಿದ್ದಾರೆ.ಹೀಗಾಗಿ ನಾವು ಕುಳಿತು ಚರ್ಚೆ ಮಾಡ್ತೀವಿ.ಯಾರ್ಯಾರಿಗೆ ಎಷ್ಟೆಷ್ಟು ಮೀಸಲಾತಿ ಹಂಚಿಕೆ ಅಂತ ತೀರ್ಮಾನ ಮಾಡ್ತೀವಿ ಅಂತಾ ಪರಮೇಶ್ವರ್ ಹೇಳಿದ್ದಾರೆ.
ಪೊಲೀಸ್ ವರ್ಗಾವಣೆ ವಿಳಂಭ ವಿಚಾರವಾಗಿ ಒಂದು ವಾರದೊಳಗೆ ಅಂತಿಮ ಮಾಡ್ತೀವಿ.ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ಒಂದು ಹಂತ.ಶಾಸಕರ ಶಿಫಾರಸ್ಸು ಪತ್ರದ ಜೊತೆ ಪರಿಶೀಲನೆ ಮಾಡಿ ವರ್ಗಾವಣೆ ಮಾಡಲಾಗುತ್ತದೆ.ಬಹುಶಃ ಇನ್ನೊಂದು ವಾರದಲ್ಲಿ ಪೊಲೀಸ್ ಇಲಾಖೆ ವರ್ಗಾವಣೆ ಪೂರ್ಣವಾಗಲಿದೆ ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.