Select Your Language

Notifications

webdunia
webdunia
webdunia
webdunia

ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿಗೆ ಕೇಂದ್ರ ತಾತ್ವಿಕ ಒಪ್ಪಿಗೆ : ಸಿಎಂ ಬೊಮ್ಮಾಯಿ

ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿಗೆ ಕೇಂದ್ರ ತಾತ್ವಿಕ ಒಪ್ಪಿಗೆ : ಸಿಎಂ ಬೊಮ್ಮಾಯಿ
bengaluru , ಶುಕ್ರವಾರ, 29 ಏಪ್ರಿಲ್ 2022 (16:42 IST)
ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:
ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯೂಪಿಎಸ್‍ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.‌

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್‌ ನಲ್ಲಿ ಮೆರವಣಿಗೆ ವೇಳೆ ಘರ್ಷಣೆ: ಪೊಲೀಸರಿಂದ ಗಾಳಿಯಲ್ಲಿ ಗುಂಡು