Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

Hubballi House Sharing Programme

Sampriya

ಹುಬ್ಬಳ್ಳಿ , ಶನಿವಾರ, 24 ಜನವರಿ 2026 (16:19 IST)
Photo Credit X
ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿದುಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.  

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಇಂದು ಬೆಳಗ್ಗೆ ಈ ಕಟೌಟ್ ಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿದ್ದು. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ