ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮತ್ತೋರ್ವ ಯುವಕ ಸಾವು

Sampriya
ಶುಕ್ರವಾರ, 27 ಡಿಸೆಂಬರ್ 2024 (17:25 IST)
ಹುಬ್ಬಳ್ಳಿ: ಇಲ್ಲಿನ ಸಾಯಿನಗರ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನ ಬಳಿ ಕಟ್ಟಡದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಲಿಂಗರಾಜ ಸಿದ್ದಪ್ಪ ಬಿರನೂರ (19) ಮೃತಪಟ್ಟಿದ್ದಾರೆ.

ಲಿಂಗರಾಜ ಇಲ್ಲಿನ ವಿದ್ಯಾನಗರ ಬಿವಿಬಿ ಕಾಲೇಜ್‌ನಲ್ಲಿ ವಾಚ್‌ಮನ್ ಆಗಿದ್ದ. ಶುಕ್ರವಾರ ಸಂಜೆ ೪ ಗಂಟೆಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಇದರಿಂದ  ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಭಾನುವಾರ ತಡರಾತ್ರಿ ಅನಿಲ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿದ ಪರಿಣಾಮ ೯ ಮಾಲಾಧಾರಿಗಳು ಸುಟ್ಟು ಗಾಯಗೊಂಡಿದ್ದರು.

ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಲ್ಲಿ ಗುರುವಾರ ನಿಜಲಿಂಗಪ್ಪ ಬೇಪುರಿ ( 58 ವರ್ಷ), ಸಂಜಯ ಸವದತ್ತಿ (18) ಹಾಗೂ ಶುಕ್ರವಾರ ಬೆಳಗ್ಗೆ ರಾಜು ಮುಗೇರಿ (16) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

ಲಿಂಗರಾಜ ಬಿರನೂರ ಅಸುನೀಗಿದ್ದಾರೆ.‌ ಇವರಿಗೆ ಶೇ.‌ 85ರಷ್ಟು ಸುಟ್ಟು ಗಾಯಗಳಾಗಿದ್ದವು. ಇನ್ನುಳಿದ ಐವರಲ್ಲಿ ಬಾಲಕ ಹೊರತುಪಡಿಸಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments