Publish Date: Sat, 21 Apr 2018 (09:49 IST)
Updated Date: Sat, 21 Apr 2018 (09:52 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ಪ್ರತಿಷ್ಠಿತ ರಾಜರಾಜೇಶ್ವರಿ ನಗರದ ಸ್ವತಂತ್ರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಬಳಗದೊಂದಿಗೆ ಬಂದ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮದೇ ವಿಶಿಷ್ಟ ಹಾವ ಭಾವದಿಂದ ಖ್ಯಾತಿ ಗಳಿಸಿದ್ದ ಹುಚ್ಚ ವೆಂಕಟ್ ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಇನ್ನು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇದೇ ಕ್ಷೇತ್ರದಿಂದ ಖ್ಯಾತ ಚಿತ್ರ ನಿರ್ಮಾಪಕರೂ ಆಗಿರುವ ಮುನಿರತ್ನ ಕೂಡಾ ತಮ್ಮ ಬೆಂಬಲಿಗರೊಂದಿಗೆ ಬಂದು ನಿನ್ನೆ ನಾಮಪತ್ರ ಸಲ್ಲಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.