Webdunia - Bharat's app for daily news and videos

Install App

ತಮಿಳುನಾಡಿಗೆ ಭಾರೀ ಪ್ರಮಾಣದ ನೀರು : ಇಂದು ರೈತಸಂಘ ಪ್ರತಿಭಟನೆ

Webdunia
ಗುರುವಾರ, 17 ಆಗಸ್ಟ್ 2023 (09:39 IST)
ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದಾರೆ.
 
ಕೆಆರ್ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಬುಧವಾರ ಕೆಆರ್ಎಸ್ನಿಂದ 9,136 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗಿತ್ತು, ಗುರುವಾರ (ಆ.17) 13,473 ಕ್ಯೂಸೆಕ್ ಹರಿಸಲಾಗುತ್ತಿದೆ. ಒಂದೇ ದಿನಕ್ಕೆ 4,337 ಕ್ಯೂಸೆಕ್ ನೀರು ಹೆಚ್ಚುವರಿ ಹರಿಸಲಾಗಿದೆ. 

ಭಾನುವಾರ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು, ಬುಧವಾರ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗಿತ್ತು . ಗುರುವಾರವಾದ ಇಂದು 13,473 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments