Publish Date: Sat, 24 Feb 2024 (19:00 IST)
Updated Date: Sat, 24 Feb 2024 (19:57 IST)
ಚೈನಾ : ಕಟ್ಟಡದ ಮೊದಲ ಮಹಡಿಯಲ್ಲಿ ಎಲೆಕ್ಟ್ರಿಕ್ ಬೈಕ್ ಗಳನ್ನು ದಾಸ್ತಾನು ಮಾಡಿ ಇಡಲಾಗಿತ್ತು. ಇಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಮೇಲ್ಮಹಡಿಗೂ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬೃಹತ್ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು 44 ಮಂದಿಗೆ ಸುಟ್ಟ ಗಾಯಗಳಾಗಿರುವ ಘಟನೆ ಚೀನಾದ ಯುಹುತಾಯ್ ಜಿಲ್ಲೆಯ ನನ್ ಜಿಂಗ್ ಪ್ರಾಂತ್ಯದಲ್ಲಿ ಶನಿವಾರ ನಡೆದಿದೆ. ಶುಕ್ರವಾರ ರಾತ್ರಿಯೇ ಬೆಂಕಿ ಅವಘಡ ಸಂಭವಿಸಿದ್ದು, ಹಲವು ಮಂದಿ ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು.ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.