ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ ನೀಡಿದ್ದಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಳೆದ 15 ದಿನಗಳಲ್ಲಿ ದಂಡದ ಪಾವತಿ ಮೊತ್ತ ₹ 45 ಕೋಟಿ ದಾಟಿದೆ.
16.21 ಲಕ್ಷ ಬಾಕಿ ಕೇಸ್‌ಗಳಿಗೆ ವಾಹನ ಮಾಲೀಕರುದಂಡ ಪಾವತಿಸಿದ್ದು, ಇಲ್ಲಿವರೆಗೆ ₹ 45.52 ಕೋಟಿ ದಂಡ ಪಾವತಿಯಾಗಿದೆ. ಇನ್ನೂ ಐದು ದಿನ ದಂಡ ಪಾವತಿಗೆ ಅವಕಾಶವಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ.
ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.
ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ 50% ಮೊತ್ತವನ್ನು ಪಾವತಿಸುವಂತೆ ರಿಯಾಯಿತಿ ಪ್ರಕಟಿಸಿದ್ದರು.