Webdunia - Bharat's app for daily news and videos

Install App

ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳು ಆಯೋಗ ದಾಳಿ

geetha
ಶನಿವಾರ, 10 ಫೆಬ್ರವರಿ 2024 (15:00 IST)
ಬೆಂಗಳೂರು-ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗದ ಡಿವೈಎಸ್ ಪಿ ಸುಧೀರ್ ಹೆಗ್ಡೆ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ.ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಧಿಕಾರಿಗಳು ದಾಳಿ ಮಾಡಿದ್ದು,ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಆಕ್ರಮವಾಗಿ ಬಂಧನದಲ್ಲಿಟ್ಟಿದ್ದರು.ಯಾಸಿನ್ ಮಹಬೂಬ್ ಖಾನ್ ಎಂಬ ಆರೋಪಿಯನ್ನು ಅಕ್ರಮವಾಗಿ ಠಾಣೆಯಲ್ಲಿ ಇಟ್ಟಿದ್ದರು.ಫೆ.1 ರಿಂದಲೂ ಸುಮಾರು 10 ದಿನಗಳ‌ ಕಾಲ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.ಬಾಂಬೆಯಿಂದ ಆರೋಪಿಯನ್ನು ವಶಕ್ಕೆ ಪಡೆದು ಕರೆತಂದಿದ್ದರು.2023 ರಲ್ಲಿ ಯಾಸಿನ್ ಮಹಬೂಬ್ ಖಾನ್ ಮೇಲೆ ಕಳ್ಳತನ ಕೇಸ್ ದಾಖಲಾಗಿತ್ತು.

ಕೇಸ್ ಆದ ಬಳಿಕ ಬಾಂಬೆಗೆ ನಾಪತ್ತೆಯಾಗಿ ಹೋಟೆಲ್ ನಲ್ಲಿ ಕೆಲಸ ಮಾಡ್ತಾ ಇದ್ದ.ಯಾಸಿನ್ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು ಆದ್ರೆ ವಾರೆಂಟ್ ಮೇಲೆ ಬಾಂಬೆಯಲ್ಲಿ ಆರೋಪಿಯನ್ನು ಬಂಧನ ಮಾಡಿದ್ದರು.ದಾಳಿ ವೇಳೆ ಠಾಣಾ ದಾಖಲಾತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿರೋ ಬಗ್ಗೆ ಉಲ್ಲೇಖ ಮಾಡಿರಲಿಲ್ಲ.ಇತ್ತ ಮನೆಯವರಿಗೂ ವಶಕ್ಕೆ ಪಡೆದಿರೋ ಬಗ್ಗೆ ಪೊಲೀಸರು ಮಾಹಿತಿ ನೀಡಿರಲಿಲ್ಲ ಹೀಗಾಗಿ ಮನೆಯವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.ದೂರು ಪಡೆದು ಠಾಣೆಯ ಮೇಲೆ  ಡಿವೈಎಸ್ಪಿ ಸುಧೀರ್ ಹಗ್ಡೆ ಅಂಡ್ ಟೀಂ ದಾಳಿ ಮಾಡಿದ್ದಾರೆ ಈ ವೇಳೆ ಆರೋಪಿಯನ್ನು ಅಕ್ರಮವಾಗಿ ಇರಿಸಿದ್ದು ಬಯಲಿಗೆ ಬಂದಿದೆ.ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಅಧಿಕಾರಿಗಳು ಹಾಜರು ಪಡಿಸಲಿದ್ದಾರೆ.ಸದ್ಯ ಅಧಿಕಾರಿಗಳು ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನ ವಿಚಾರಣೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments