ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಗ್ರಾಮದ ಜನರು 2019-2021ರಲ್ಲಿ ಪ್ರವಾಹಕ್ಕೆ ಸಿಲುಕಿ ಮನೆಮಠ ಕಳೆದುಕೊಂಡಿದ್ದು, ಈಗ ಮತ್ತೆ ಮೂರನೇ ಬಾರಿ ಪ್ರವಾಹದ ಆತಂಕ ಶುರುವಾಗಿದೆ. ಮನೆ ಮೆಟ್ಟಿಲವರೆಗೂ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ.