Publish Date: Thu, 22 Feb 2018 (17:05 IST)
Updated Date: Thu, 22 Feb 2018 (17:07 IST)
ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವುದು ನಮ್ಮ ಕನಸಾಗಿತ್ತು. ಈಗ ಅದು ಸಾಧ್ಯವಾಗಿದ್ದು, ಇದಕ್ಕಿಂತ ತೃಪ್ತಿ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನ ಮಂಡಲದ ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು. ಅನ್ನಭಾಗ್ಯ ಯೋಜನೆ ಮೂಲಕ ನಮ್ಮ ಕನಸನ್ನು ಸಾಕಾರ ಮಾಡುತ್ತಿದ್ದೇವೆ. ಇಂದಿರಾ ಕ್ಯಾಂಟೀನ್‌ನಿಂದ ರಾಜ್ಯ ಹಸಿವು ಮುಕ್ತ ಆಗಿದೆ ಎಂದಿದ್ದಾರೆ.
ಹಸಿದು ಬಂದವರಿಗೆ ಅನ್ನ, ಹಾಲು, ಬೆಣ್ಣೆ ನೀಡಬೇಕು ಎಂದು ಸರ್ವಜ್ಞರೇ ಹೇಳಿದ್ದಾರೆ. ಇದನ್ನು ಸರಕಾರದ ಕೊಡುಗೆ ಎಂದು ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.