Select Your Language

Notifications

webdunia
webdunia
webdunia
webdunia

ಧಾರವಾಡ ಪೀಠ ಸೇರಿ ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠಕ್ಕೂ ಒಂದು ವಾರ ದಸರಾ ರಜೆ

ಧಾರವಾಡ ಪೀಠ ಸೇರಿ ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠಕ್ಕೂ ಒಂದು ವಾರ ದಸರಾ ರಜೆ
bangalore , ಶುಕ್ರವಾರ, 1 ಅಕ್ಟೋಬರ್ 2021 (21:55 IST)
ಬೆಂಗಳೂರು: ಅ. 11ರಿಂದ 16ರವರೆಗೆ ಕಲಬುರಗಿ ಹಾಗೂ ಧಾರವಾಡ ಪೀಠ ಸೇರಿ ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠಕ್ಕೂ ಒಂದು ವಾರ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್​ನ ಹಂಗಾಮಿ ಸಿಜೆ ಎಸ್ ಸಿ ಶರ್ಮಾ ಅವರ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಈ ಕುರಿತು ನೋಟಿಫಿಕೇಶನ್ ಹೊರಡಿಸಿದ್ದಾರೆ. ಅದರಂತೆ, ಹೈಕೋರ್ಟ್​ನ ಎಲ್ಲ ಪೀಠಗಳಿಗೆ ಒಂದು ವಾರ ದಸರಾ ರಜೆ ನೀಡಲಾಗಿದೆ.
ಈ ಅವಧಿಯಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ, ಮೇಲ್ಮನವಿ ಸ್ವೀಕರಿಸುವುದಿಲ್ಲ. ಹಾಗಿದ್ದೂ, ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡೆಯಾಜ್ಞೆ ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅ.8ಕ್ಕೆ ದೆಹಲಿಗೆ ಮುಖ್ಯಮಂತ್ರಿ ಬೊಮ್ಮಾಯಿ: ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಅಧ್ಯಕ್ಷರ ನೇಮಕ