Select Your Language

Notifications

webdunia
webdunia
webdunia
webdunia

ಶಾಯಿನ್ ಚಂಡಮಾರುತದ ಪರಿಣಾಮ ಶುಕ್ರವಾರ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆ

Hurricane Shain caused heavy rain on the state's northern inland
bangalore , ಶುಕ್ರವಾರ, 1 ಅಕ್ಟೋಬರ್ 2021 (22:01 IST)
ಬೆಂಗಳೂರು: ಶಾಯಿನ್ ಚಂಡಮಾರುತದ ಪರಿಣಾಮ ಶುಕ್ರವಾರ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ.
ಉತ್ತರ ಒಳನಾಡಿದ ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಅ.2 ರಿಂದ 6 ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಅ. 4ರವರೆಗೆ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧಾರವಾಡ ಪೀಠ ಸೇರಿ ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠಕ್ಕೂ ಒಂದು ವಾರ ದಸರಾ ರಜೆ