Publish Date: Wed, 11 May 2022 (20:19 IST)
Updated Date: Wed, 11 May 2022 (20:26 IST)
ಅಸಾನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸಾನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆಯಾಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ನಿನ್ನೆ ನಗರದ ಬಹುಭಾಗಗಳಲ್ಲಿ ಗಾಳಿ ಜೊತೆಗೆ ತುಂತುರು ಮಳೆ ಆಗಿತ್ತು. ಇಂದು ಸಹ ಅಂತದ್ದೆ ಪರಿಸ್ಥಿತಿ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಅನೇಕ ಕಡೆ ಅಸಾನಿ ಎಫೆಕ್ಟ್ ಇರಲಿದೆ.