ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ?

Webdunia
ಗುರುವಾರ, 8 ಜೂನ್ 2023 (11:59 IST)
ಹಾವೇರಿ : ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ ತಾನೂ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದ್ರಾಕ್ಷಾಣೆವ್ವ (45) ಎಂಬಾಕೆಯನ್ನು ಆಕೆಯ ಪತಿ ಪ್ರಭು ವಾರತಿ (52) ಎಂಬಾತ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
 
ಈತ ತನ್ನ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ್ದ ಕಾರಣ ಪ್ರತಿದಿನ ಮನೆಯಲ್ಲಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.   ಮಂಗಳವಾರ ಇದೇ ರೀತಿ ಜಗಳ ಆಡುತ್ತಿದ್ದ ಸಂದರ್ಭ ಇವರ ಜಗಳ ಅತಿರೇಕಕ್ಕೆ ಹೋಗಿ ಇಬ್ಬರ ನಡುವೆ ಹೊಡೆದಾಟ ಪ್ರಾರಂಭವಾಗಿದೆ.

ಈ ವೇಳೆ ಗಂಡ ಮಚ್ಚಿನಿಂದ ಹೆಂಡತಿಯನ್ನು ಹತ್ಯೆ ಮಾಡಿದ್ದು, ಬಳಿಕ ತಾನೂ ಮನೆಯ ಮುಂದೆ ನೇಣಿಗೆ ಶರಣಾಗಿದ್ದಾನೆ. ಸತಿ-ಪತಿಯ ಸಾವಿನಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments