Publish Date: Fri, 17 Dec 2021 (08:50 IST)
Updated Date: Fri, 17 Dec 2021 (09:08 IST)
ಮೈಸೂರು: 5 ತಿಂಗಳ ಗರ್ಭಿಣಿ ಪತ್ನಿಯನ್ನು ನದಿಯಲ್ಲಿ ಮುಳುಗಿಸಿ ಪತಿಯೇ ಕೊಲೆಗೈದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಗರ್ಭಿಣಿ ಪತ್ನಿ ಮತ್ತು ಮಕ್ಕಳನ್ನು ಕಪಿಲಾ ನದಿಗೆ ಕರೆದೊಯ್ದ ಪತಿ ಕೊಲೆಗೆ ಸಂಚು ರೂಪಿಸಿದ್ದ. ಆದರೆ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಆದರೆ ಗರ್ಭಿಣಿ ಪತ್ನಿಯನ್ನು ರಕ್ಷಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.