ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
26 ವರ್ಷದ ಮಹಿಳೆ ಕೊಲೆಗೀಡಾಗಿದ್ದಾಳೆ. ಪತಿ-ಪತ್ನಿ ನಡುವೆ ಕೌಟುಂಬಿಕ ಕಲಹವಿತ್ತು. ಈ ಬಗ್ಗೆ ಹಿರಿಯರ ಸಮ್ಮುಖದಲ್ಲಿ ರಾಜೀ ಸಂಧಾನವೂ ನಡೆದಿತ್ತು. ಆದರೆ ಪ್ರಯೋಜನವಾಗಿರಲಿಲ್ಲ.
ರಾಜೀ ಸಂಧಾನದ ಕೆಲವೇ ಕ್ಷಣಗಳಲ್ಲಿ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.