ಮಗು ಕಪ್ಪು ಎಂಬ ಅನುಮಾನ ಪತ್ನಿಯನ್ನು ಕೊಂದ ಪಾಪಿ

Webdunia
ಸೋಮವಾರ, 26 ಸೆಪ್ಟಂಬರ್ 2022 (16:50 IST)
ತನ್ನ ಹಾಗೂ ಪತ್ನಿಯ ಬಣ್ಣ ಬಿಳಿಯಾಗಿದ್ದರೂ, ಮಗುವಿನ ಬಣ್ಣ ಮಾತ್ರ ಕಪ್ಪು ಎಂದು ಪತ್ನಿಯ ಶೀಲ ಶಂಕಿಸಿ ಆತನನ್ನು ಕೊಲೆ ಮಾಡಿದ್ದಾನೆ ಇಲ್ಲೊಬ್ಬ ಪಾತಕಿ! ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದಂಪತಿಯ ಮದುವೆ ಏಳು ವರ್ಷಗಳ ಹಿಂದೆ ಆಗಿದೆ. ಮದುವೆಯ ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು. ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು.
 
ಇಬ್ಬರು ಬೆಳ್ಳಗಿದ್ದರೂ ಮಗು ಕಪ್ಪಗೆ ಕಪ್ಪಾಗಿರುವುದಕ್ಕೆ ಈ ಪತಿ ಸದಾ ಪತ್ನಿಯ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ಕೂಡ ಆಗಿದೆ. ಪತಿಯ ದೌರ್ಜನ್ಯ ಸಹಿಸದೇ ಲಿಪಿಕಾ ತವರಿಗೆ ಬಂದಿದ್ದರು. ನಂತರ ಕುಟುಂಬಸ್ಥರು ಇಬ್ಬರನ್ನೂ ರಾಜಿ ಮಾಡಿದ್ದರು. ಗಂಡನ ಮನೆಗೆ ಲಿಪಿಕಾ ವಾಪಸಾಗಿದ್ದರು.
 
ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು.
 
ಆದರೆ ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.
 
ಅಲ್ಲಿಯವರೆಗೂ ಮಗಳು ಪ್ರಜ್ಞೆ ತಪ್ಪಿ ಸತ್ತಿದ್ದಾಳೆ ಎಂದುಕೊಂಡಿದ್ದ ಅವರಿಗೆ ಅಳಿಯನೇ ಮಗಳನ್ನು ಕೊಂದಿದ್ದಾನೆ ಎಂಬುದು ಮೊಮ್ಮಗಳ ಮಾತಿನ ಮೂಲಕ ಅರ್ಥವಾಗಿ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪೊಲೀಸರ ಬಳಿ ಕೂಡ ಮಗು ಅಂದು ನಡೆದ ಘಟನೆ ವಿವರಿಸಿದೆ. ಪತಿಯನ್ನು ಪೊಲೀಸರು ಬಂಧಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments