ವಿಜಯಪುರ: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಶೆಡ್ ಒಂದಕ್ಕೆ ಪತ್ನಿಯನ್ನು ಕರೆದೊಯ್ದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಹೊಲದಲ್ಲಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಿಂದ ಶೀಲ ಶಂಕಿಸಿ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದುಬಂದಿದೆ.