Publish Date: Fri, 18 Sep 2026 (18:22 IST)
Updated Date: Fri, 18 Sep 2026 (18:32 IST)
ಬೆಂಗಳೂರು: ಫೋನ್ ಕರೆ ಮಾಡಿದಾಗ ಪತ್ನಿ ರಿಸೀವ್ ಮಾಡಿಲ್ಲವೆಂದು ಪತ್ನಿಯನ್ನು ಆಕೆಯ ಗಂಡ ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಮೈಕೋ ಲೇಜೌಟ್‌ನ ಬಿಳೇಕಹಳ್ಳಿಯಲ್ಲಿ ವರದಿಯಾಗಿದೆ.
ಗುಂಜಾ ಮದೇಷಿಯಾ (38) ಕೊಲೆಯಾದ ಮಹಿಳೆ. ಆಕೆಯ ಪತಿ ರಂಜಿತ್ ಕುಮಾರ್ ಗುಪ್ತಾ ಬಂಧಿತ ಆರೋಪಿ. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಕೋ ಲೇಔಟ್‌ನ ಬಿಳೇಕಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ- ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ ಮಕ್ಕಳು ಶಾಲೆಗೆ ತೆರಳಿದ ಬಳಿಕ ಮತ್ತೆ ಗಲಾಟೆ ಶುರುವಾಗಿದೆ. ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ ಪತಿರಾಯ, ಕುದಿಯೋ ಎಣ್ಣೆ ಸುರಿದು ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಇದರಿಂದ ಶವ ವಿರೂಪವಾಗಿ ಆಕಸ್ಮಿಕ ಘಟನೆ ಎಂದು ಬಿಂಬಿಸಲು ಹೋಗಿದ್ದಾನೆ. ಆದರೆ, ಇವರ ಜಗಳವನ್ನು ನೋಡಿದ್ದ ನೆರೆಹೊರೆಯವರು ಮಹಿಳೆ ಕಾಣದಿದ್ದಕ್ಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ