ಬೆಂಗಳೂರು : ಪತ್ನಿಯ ಅತಿಯಾದ ಸ್ವಚ್ಛತೆಯ ಗೀಳಿನಿಂದ ಬೇಸತ್ತಿರುವ ಪತಿ ದಾಂಪತ್ಯ ಕಡೆದುಕೊಳ್ಳು ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಒಸಿಡಿ ಸಮಸ್ಯೆಯಿಂದ ಬಳಲುತ್ತಿರುವ 35 ವರ್ಷದ ಮಹಿಳೆ ಲ್ಯಾಪ್ಟಾಪ್, ಸೆಲ್ಫೋನ್ಗಳನ್ನು ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುವ ಅತಿರೇಕದ ವರ್ತನೆಯಿಂದ ರೋಸಿರುವ ಪತಿ ಪೊಲೀಸರ ಮೊರೆ ಹೋಗಿದ್ದಾನೆ. ಪೊಲೀಸರು ಈ ಪ್ರಕರಣವನ್ನು ವನಿತಾ ಸಹಾಯವಾಣಿ ಪರಿಹಾರ್ಗೆ ಶಿಫಾರಸು ಮಾಡಿದ್ದಾರೆ.