Webdunia - Bharat's app for daily news and videos

Install App

ಪತ್ನಿಗೆ ನಡೆದ ಕೆಟ್ಟ ಘಟನೆ ; ಆರೋಪಿಗಳ ವಿರುದ್ಧ ಸೇಡು ತೀರಿಸಿಕೊಂಡ ಪತಿ

Webdunia
ಗುರುವಾರ, 9 ಜನವರಿ 2020 (17:17 IST)
ಪತ್ನಿಯ ಆ ಕೆಟ್ಟ ಘಟನೆಗೆ ಕಾರಣವಾಗಿದ್ದವರ ವಿರುದ್ಧ ನಡೆದ ಹೋರಾಟದಲ್ಲಿ ಪತಿಯೊಬ್ಬ ಜಯ ಗಳಿಸಿದ್ದಾರೆ.

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತನ್ನ ಪತ್ನಿಯ ಸಾವಿಗೆ ಕಾರಣರಾಗಿದ್ದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ ವಿರುದ್ಧ ಹೋರಾಟ ನಡೆಸಿದ ಪತಿಗೆ ಕೊನೆಗೂ ಜಯ ಸಿಕ್ಕಿದೆ.

ಕಳೆದ ಒಂದು ವರ್ಷದ ಹಿಂದೆ ಕರ್ತವ್ಯ ಲೋಪ ಎಸಗಿ ಮಹಿಳೆಯೊಬ್ಬರ ಸಾವಿಗೆ ಕಾರಣರಾಗಿದ್ದ ನಾಲ್ಕು ಜನ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯನ್ನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಹೋರಾಟ ನಡೆಸಿದ ಪತಿಯ ಪ್ರಯತ್ನಕ್ಕೆ ಕೊಂಚ ನ್ಯಾಯ ದೊರಕಿದಂತಾಗಿದೆ.

ಜಿಲ್ಲಾಸ್ಪತ್ರೆಯ ಡಾ. ಆಶ್ರಪುಲ್ಲಾ ಎಮ್.ಆರ್ (ಹಿರಿಯ ತಜ್ಞ), ಡಾ. ಸುನಂದಾ ಮಾಡಬಾಳ, ವಿದ್ಯಾವತಿ.ಎನ್ (ಶುಶ್ರೂಶಕಿ), ಈರಣ್ಣ ಬೆಳಗಾವಿ (ಡಿ ಗ್ರೂಪ್‌ ನೌಕರ) ಇವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

2018ರಲ್ಲಿ ಈ ನಾಲ್ವರ ಕರ್ತವ್ಯದಲ್ಲಿನ ನಿರ್ಲಕ್ಷ್ಯತೆಯಿಂದಾಗಿ ಮಹಿಳಾ ರೋಗಿಯೊಬ್ಬರು ಮೃತಪಟ್ಟಿದ್ದರು. ತನ್ನ ಪತ್ನಿಯ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಮೃತಳ ಪತಿ ಪ್ರಶಾಂತ ಪವಾರ ಎಂಬುವರು ನಿರಂತರ ಒಂದು ವರ್ಷದಿಂದ ಹೋರಾಟ ನಡೆಸಿದ್ದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments