Select Your Language

Notifications

webdunia
webdunia
webdunia
webdunia

ನಗ್ನಚಿತ್ರ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿದ ಪತಿ..!

ನಗ್ನಚಿತ್ರ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿದ ಪತಿ..!
ಬೆಂಗಳೂರು , ಮಂಗಳವಾರ, 19 ಏಪ್ರಿಲ್ 2022 (08:10 IST)
ಬೆಂಗಳೂರು : ಪತಿರಾಯನೊಬ್ಬ ಕಟ್ಟಿಕೊಂಡ ಹೆಂಡ್ತಿಯ ನಗ್ನಚಿತ್ರಗಳನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ.

ಅಚ್ಚರಿ ಅನ್ನಿಸಿದರೂ ಸತ್ಯ. ಜ್ಯೂಸ್ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಪತ್ನಿಗೆ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನಚಿತ್ರ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 ಘಟನೆ ಸಂಬಂಧ ಕನಕಪುರ ರಸ್ತೆಯ ನಿವಾಸಿ ಮಹಿಳೆ (30) ದೂರಿನ ಆಧಾರದ ಮೇಲೆ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ  ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ್ದು, ವೆಂಕಟಸ್ವಾಮಿಯನ್ನು ಪ್ರೀತಿಸಿ 2ನೇ ವಿವಾಹವಾಗಿದ್ದಳು. ವಿವಾಹವಾದ ಆರಂಭದಲ್ಲಿ ಪತ್ನಿ ಜತೆಗೆ ಅನ್ಯೋನ್ಯವಾಗಿದ್ದ ಪತಿ, ನಂತರ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಇತ್ತೀಚೆಗೆ ಆರೋಪಿಯು ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಬೆರೆಸಿ ಪತ್ನಿಗೆ ಕೊಟ್ಟಿದ್ದ.

ಪತ್ನಿ ಪ್ರಜ್ಞೆ ತಪ್ಪಿದ ನಂತರ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ್ದ.ಸ್ನೇಹಿತನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪತ್ನಿಗೆ ಪೀಡಿಸುತ್ತಿದ್ದ. ಈ ನಡುವೆ ದೂರುದಾರ ಮಹಿಳೆಯ ತಂದೆ ಮೃತಪಟ್ಟಿದ್ದರು. ತಂದೆಗೆ ಬರುವ ಪೆನ್ಷನ್ ಹಣ ಕೊಡುವಂತೆ ಪತಿ ಹಿಂಸೆ ಕೊಡುತ್ತಿದ್ದ. ಹಣ ಕೊಡಲು ನಿರಾಕರಿಸಿದಾಗ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಮು ಪರಿಸ್ಥಿತಿ ಸೃಷ್ಟಿಸಲು ಬಿಜೆಪಿ ಯತ್ನ: ಶರದ್ ಪವಾರ್