ಆಘಾತಕಾರಿ ಘಟನೆಯೊಂದರಲ್ಲಿ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ನಗ್ನಗೊಳಿಸಿ ಮರಕ್ಕೆ ಕಟ್ಟಿ ಹತ್ಯೆಯಾಗುವವರೆಗೆ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ನಿರ್ಮಲಾ ಎನ್ನುವ ವಿವಾಹಿತ ಮಹಿಳೆ ಹತ್ಯೆಯಾದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ನಿನ್ನೆ ನಿರ್ಮಲಾ ಮನೆಯಲ್ಲಿ ಏಕಾಂಗಿಯಾಗಿರುವುದು ಕಂಡ ಪ್ರಿಯಕರ ಮನೆಗೆ ನುಗ್ಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲವಾದ್ದರಿಂದ ನಿರ್ಮಲಾ ಮತ್ತು ಆಕೆಯ ಪ್ರಿಯಕರ ರಂಗುರಂಗಿನಾಟ ನಡೆಸಿದ್ದಾರೆ. ಅದೇ ವೇಳೆಯಲ್ಲಿ ಮನೆಗೆ ಬಂದ ಪತಿಗೆ ಪತ್ನಿ ಮತ್ತು ಆಕೆಯ ಪ್ರಿಯಕರನ ಕೃತ್ಯ ಬಹಿರಂಗವಾಗಿದೆ ಎನ್ನಲಾಗಿದೆ.
ಇದರಿಂದ ಆಕ್ರೋಶಗೊಂಡ ಪತಿ ತನ್ನ ಗೆಳೆಯರೊಂದಿಗೆ ಸೇರಿ ಪತ್ನಿ ನಿರ್ಮಲಾ ಮತ್ತು ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ಥಳಿತದಿಂದಾಗಿ ಪ್ರಿಯಕರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಏತನ್ಮದ್ಯೆ, ಪತಿಯ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ನಿರ್ಮಲಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಎಲ್ಲರು ನಾಪತ್ತೆಯಾಗಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!