Publish Date: Wed, 24 Aug 2016 (15:23 IST)
Updated Date: Wed, 24 Aug 2016 (15:27 IST)
ತಾಯಿ ಹಾಗೂ ಮಗಳ ಮೇಲೆ ಸೀಮೆ ಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಂಗಾರಪುರದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ನಂಜುಂಡ, ಅತ್ತೆ ಕೆಂಪಮ್ಮ ಹಾಗೂ ಮೈದುನ ಶಿವಣ್ಣ ಸೇರಿ ತಾಯಿ ಹಾಗೂ ಮಗಳ ಮೇಲೆ ಸೀಮೆ ಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ರಂಜಿತಾ (25) ಹಾಗೂ ಅವರ 4 ವರ್ಷದ ಮಗಳು ಇಂಪನಾಗೆ ಗಂಭೀರವಾಗಿ ಗಾಯಗಳಾಗಿದ್ದು, ಇವರನ್ನು ಮಂಡ್ಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಂಡ್ಯ ಜಿಲ್ಲೆಯ ಕಿರುಗಾವಲು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ