Select Your Language

Notifications

webdunia
webdunia
webdunia
webdunia

ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!

ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!
ಮೈಸೂರು , ಮಂಗಳವಾರ, 28 ಜೂನ್ 2022 (11:17 IST)
ಮೈಸೂರು : ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಮ್ಮ(40) ಕೊಲೆಯಾದ ಮಹಿಳೆ. ಪತಿ ದೇವರಾಜ್ ಬಂಧನಕ್ಕೆ ವರುಣಾ ಪೊಲೀಸರು ಜಾಲ ಬೀಸಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್, ನಂತರ ಎರಡನೇ ಮದುವೆಯಾಗಿ ಈಗ ಆಕೆಯನ್ನು ಕೂಡ ಕೊಲೆ ಮಾಡಿದ್ದಾನೆ. 

ಮೊದಲ ಹೆಂಡತಿಯಿಂದ ದೂರವಾದ ದೇವರಾಜ್, 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು ಎರಡನೇ ವಿವಾಹವಾಗಿದ್ದ. ಎರಡನೇ ಮದುವೆಯಾದರೂ ಪುಟ್ಟಮ್ಮಳ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ. 20 ವರ್ಷದ ಮಗಳಿದ್ದರೂ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ದೇವರಾಜ್ ಕಿರುಕುಳ ಹೆಚ್ಚಾಗಿತ್ತು.

ಮಗಳು ಪವಿತ್ರ ಕಾಲೇಜಿಗೆ ಹೋಗಿದ್ದ ವೇಳೆ ಇದೇ ವಿಚಾರಕ್ಕೆ ಕ್ಯಾತೆ ತೆಗೆದ ದೇವರಾಜ್ ಪತ್ನಿಯನ್ನು ಭೀಕರವಾಗಿ ಕೊಂದಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ವಾರಿಯಲ್ಲಿ ನಿಯಮ ಉಲ್ಲಂಘನೆ!