Select Your Language

Notifications

webdunia
webdunia
webdunia
Thursday, 17 April 2025
webdunia

ನೀವು ಹೊರ ರಾಜ್ಯಗಳಿಂದ ಬಂದಿದ್ದರೆ ಹುಷಾರ್

ಹೊರ ರಾಜ್ಯ
ಧಾರವಾಡ , ಮಂಗಳವಾರ, 12 ಮೇ 2020 (18:31 IST)
ದೇಶದ  ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ತಪ್ಪದೇ ಇದನ್ನು ಪಾಲಿಸಬೇಕು.

ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡುವುದು ಕಡ್ಡಾಯವಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ,  ದೇಶದ ಯಾವುದೇ  ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು.

ಈ ಸೌಲಭ್ಯಕ್ಕಾಗಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪಗಳಂತಹ ಕಟ್ಟಡ ಗುರುತಿಸಲಾಗಿದೆ. ಸ್ವತಃ  ವೆಚ್ಚ ಭರಿಸಲು ಸಿದ್ಧ ಇರುವವರಿಗೆ ಹೋಟೆಲ್ ಗಳಲ್ಲಿಯೂ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಈ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಬಸ್ ಸಂಚಾರ ಆರಂಭ