Webdunia - Bharat's app for daily news and videos

Install App

ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕ: ವಿಜಯೇಂದ್ರ

Sampriya
ಮಂಗಳವಾರ, 26 ನವೆಂಬರ್ 2024 (18:10 IST)
Photo Courtesy X
ಬೆಂಗಳೂರು: ಬಿಜೆಪಿ, ಆರ್ ಎಸ್ಎಸ್ ಸಂವಿಧಾನ ವಿರೋಧಿಗಳು, ಅವರ ಕೈಗೆ ಅಧಿಕಾರ ಹೋಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಇದಕ್ಕೆ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ನಡೆಯುತ್ತಿದೆ.

ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ- ರಾಜ್ಯದ ಜನರು ಮರೆತಿಲ್ಲ ಎಂದರು.

ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ- ಎಲ್ಲ ಆಯಾಮಗಳಲ್ಲಿ ಚರ್ಚೆ ಮಾಡಿ, ಬಾಬಾಸಾಹೇಬ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನವನ್ನು ಡಾ.ಅಂಬೇಡ್ಕರರು ನೀಡಿದ್ದು, ಅದು ಸಾರ್ವಕಾಲಿಕ; ಸದಾ ಪ್ರಸ್ತುತ ಎಂದು ವಿವರಿಸಿದರು. ಸಂವಿಧಾನದ ಕುರಿತು ಅಪಸ್ವರ ಬರಬಾರದು ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಸಂವಿಧಾನದ ಪೀಠಿಕೆಯ ಪಠಣ ಮಾಡಿಸಿದರು. ನವೆಂಬರ್ 26 ಅನ್ನು ಕಡೆಗಣಿಸಿದ ಷಡ್ಯಂತ್ರದ ಕುರಿತು ಅವರು ವಿವರಿಸಿದರು. ಮೋದಿಯವರು ಪ್ರಧಾನಿಗಳಾದ ಬಳಿಕ ಈ ದಿನವನ್ನು ಸಂವಿಧಾನ ದಿನವನ್ನಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಡಾ. ಅಂಬೇಡ್ಕರರ ಸಂವಿಧಾನವು ಇಡೀ ದೇಶದ ಮುನ್ನೋಟವನ್ನು ನೀಡಿದೆ ಎಂದು ವಿವರಿಸಿದರು.
ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಅವರು ಮಾತನಾಡಿ, ನವೆಂಬರ್ 26 ನಮ್ಮೆಲ್ಲರಿಗೂ ವೈಭವದ, ಸಂಭ್ರಮದ ದಿನ. ಸಂವಿಧಾನ ರಚನೆಯ ಜವಾಬ್ದಾರಿಯನ್ನು ಡಾ. ಅಂಬೇಡ್ಕರರಿಗೆ ನೀಡಿದ್ದು, ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ರಚಿಸಿ ನೀಡಿದ್ದಾರೆ ಎಂದು ವಿವರಿಸಿದರು.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ್, ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ಬಸವರಾಜ ಮತ್ತಿಮೊಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ, ಮುಖಂಡ ಜಗದೀಶ್ ಹಿರೇಮನಿ, ರಾಜ್ಯ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments